ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೆಟ್ಟಂಪಾಡಿ ಮಿತ್ತಡ್ಕ ನಿವಾಸಿ ಈಶ್ವರಮಂಗಲದಲ್ಲಿ ಕಮ್ಯೂನಿಟಿ ಹೆಲ್ತ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಜ್ಞಾ (26) ಎಂದು ಗುರುತಿಸಲಾಗಿದೆ.
ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಾಯಿ ಮತ್ತು ಸಹೋದರಿಯನ್ನು ಆಗಲಿದ್ದಾರೆ.


























