ಮಾಣಿ: ಶಾಲಾ ಬಸ್ ಮೇಲೆ ಬುಡಸಮೇತವಾಗಿ ಮರ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಮಾಣಿ ಬರಿಮಾರ್ ಬಳಿ ನಡೆದಿದೆ.
ಕಲ್ಲಡ್ಲ ಶಾಲೆಯ ಬಸ್ ಮೇಲೆ ಮರ ಬಿದ್ದ ಪರಿಣಾಮ ಬಾಲಕಿಯೋರ್ವಳಿಗೆ ಗಂಭೀರ ಗಾಯಗಳಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.ಗಾಯಾಳು ಮಕ್ಕಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಪುತ್ತೂರು ಹಾಗೂ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಬಾಲಕಿಯನ್ನು ಬಿಳಿಯೂರು ಗ್ರಾಮದ ಚಿರಣ್ವಿ (5)ಎಂದು ಗುರುತಿಸಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಸದ್ಯ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.



























