ಪುತ್ತೂರು: ಪುತ್ತೂರು ನಗರದ ದರ್ಬೆ ಅಶ್ವಿನಿ ಸರ್ಕಲ್‌ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪುತ್ತೂರು ಕಸಬಾ ನಿವಾಸಿ ಬಿ. ಮಹಮ್ಮದ್ ಇಸಾಕ್ (38) ಎಂದು ಗುರುತಿಸಲಾಗಿದೆ.
ಜುಲೈ 22ರಂದು ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ದರ್ಬೆ ಅಶ್ವಿನಿ ಸರ್ಕಲ್‌ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮಹಮ್ಮದ್ ಇಸಾಕ್ ಅವರನ್ನು ವಿಚಾರಣೆ ನಡೆಸಿದಾಗ ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸಂಬಂಧಿತ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.



























