ಸುಳ್ಯದ ಸಂಪಾಜೆಯಲ್ಲಿ ತನ್ನ ಗಂಡನ ಮನೆಯಲ್ಲಿ ಇತ್ತೀಚೆಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನಾ ಅವರ ತಾಯಿಯ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ಈ ಸಂದರ್ಭದಲ್ಲಿ ಮೃತೆಯ ಕುಟುಂಬದವರೊಂದಿಗೆ ಮಾತನಾಡಿದ ಅವರು, ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು. ಪ್ರಕರಣದ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದರು. ಮೃತೆಯ ಕುಟುಂಬಕ್ಕೆ ನ್ಯಾಯ ದೊರಕುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.



























