ಪುತ್ತೂರು: ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪರ್ಪುಂಜ ಬಳಿ ನಡೆದಿದೆ.
ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಬಳಿಕ ಮಾರುತಿ 800 ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರಿಗೆ ಗಾಯಗಳಾಗಿದೆ.
ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾದರೆ ಪರ್ಪುಂಜ ನಿವಾಸಿ ಸುಶ್ಮಿ ಕ್ಯಾಟರರ್ ಮಾಲಕ ಸುರೇಶ್ ಯಾನೆ ಹರಿಚಂದ್ರ ಅವರ ಕಾಲಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಸಂಪ್ಯದ ಮೆಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.



























