ಮಂಗಳೂರು : ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು, ಯುರೋಪ್ ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.


























