ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯಿಂದ ಆಗಸ್ಟ್ 7ರಂದು ನಡೆಯಲಿರುವ ತಿರಂಗ ಯಾತ್ರೆಯ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ತಿರಂಗ ಯಾತ್ರೆಯನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಸಮಾಲೋಚನೆ ನಡೆಸಲಾಯಿತು. ಕಾರ್ಯಕ್ರಮದ ರೂಪುರೇಷೆ, ಕಾರ್ಯಕರ್ತರ ಜವಾಬ್ದಾರಿಗಳು ಹಾಗೂ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆಗೆ ಅಗತ್ಯ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಶ್ರೀ ಸಂಜೀವ ಮಠಂದೂರು, ನಗರ ಮಂಡಲದ ಅಧ್ಯಕ್ಷರಾದ ಶ್ರೀ ಶಿವಕುಮಾರ ಕಲ್ಲಿಮಾರ್, ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ ಉಜಿರ್ಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಸುನೀಲ್ ಆಳ್ವಾ ಹಾಗೂ ಶ್ರೀ ಪ್ರಸನ್ನ ಮಾರ್ತ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



























