ಬಂಟ್ವಾಳ: ಬಂಟ್ವಾಳದ ಖ್ಯಾತ ಜ್ಯೋತಿಷಿ ಹಾಗೂ ಆಧ್ಯಾತ್ಮಿಕ ಚಿಂತಕರಾದ ಅನಿಲ್ ಪಂಡಿತ್ ಬ್ರಹ್ಮರಕೋಟ್ಲು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್‌ಗಳು ಪ್ರಕಟವಾಗಿರುವುದನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಹಿಂದೂ ಜಾಗರಣ ವೇದಿಕೆಯು, ಅನಿಲ್ ಪಂಡಿತ್ ಅವರು ಹಲವು ವರ್ಷಗಳಿಂದ ಸಮಾಜದ ವಿವಿಧ ವರ್ಗದ ಜನರಿಗೆ ಸೇವಾ ಮನೋಭಾವದಿಂದ ಜ್ಯೋತಿಷ್ಯ ಮಾರ್ಗದರ್ಶನ ಹಾಗೂ ಆಧ್ಯಾತ್ಮಿಕ ಸೇವೆಗಳನ್ನು ನೀಡುತ್ತಾ ಬಂದಿದ್ದು, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದೆ. ಕೆಲವು ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಜಾಲತಾಣಗಳಲ್ಲಿ ಅವರ ವಿರುದ್ಧ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ ತೇಜೋವಧೆಗೆ ಯತ್ನಿಸುತ್ತಿವೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಅನಿಲ್ ಪಂಡಿತ್ ಅವರು ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



























