ಉಡುಪಿ: ನಗರದ ಕೋರ್ಟ್ ರಸ್ತೆ ಸಮೀಪ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ಅವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಲಕ್ಷ್ಮೀ ಕೊಳ ಅವರು ಕೋರ್ಟ್ ರಸ್ತೆ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ಹೊಡೆದು ಚಕ್ರ ಮೈಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಲಕ್ಷ್ಮೀ ಅವರು ಬಿಜೆಪಿ ಮುಖಂಡ ಮಂಜು ಕೊಳ ಅವರ ಪತ್ನಿ.
ಘಟನೆಗೆ ಸಂಬಂಧಿಸಿದಂತೆ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



























