ವಿಟ್ಲ: ಮನೆ ಸಮೀಪದ ಅಡಿಕೆ ತೋಟದಲ್ಲಿ ನೀರು ಹರಿಯುವ ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ – ವೃದ್ಧರೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆ.1ರಂದು ಮೃತಪಟ್ಟಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75 ವ.) ಮೃತಪಟ್ಟವರು.
ಗಿರಿಯಪ್ಪರವರು ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕದ ದಿನಗಳಲ್ಲಿ ಅವರು ಮನೆ ಸಮೀಪದ ತೋಟದಲ್ಲಿ ನೀರು ಹೋಗುವ ಚರಂಡಿಯಲ್ಲಿ ಗಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ


























