ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಇಂದು (ಆಗಸ್ಟ್ 3) ಬೆಳಿಗ್ಗೆ 10:30ಕ್ಕೆ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದೆ.
ರಸ್ತೆ ನಿರ್ಮಾಣದ ಕುರಿತು ಸಮಿತಿಯ ನಿಲುವು ಹಾಗೂ ಸಂಬಂಧಿತ ಮಾಹಿತಿಯನ್ನು ಈ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಲಾಗುವುದು ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























