ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹಾಗೂ ಕಾಂಪೌಂಡ್ ನಿರ್ಮಾಣ ಕಾಮಗಾರಿಯನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಕಂಬಳಕೋಡಿ ನಿವಾಸಿಗಳು ಮನವಿ ಸಲ್ಲಿಸಿದ್ದಾರೆ.
ದೇವಸ್ಥಾನದ ಸುರಕ್ಷತೆ ಹಾಗೂ ಭಕ್ತರ ಸುಗಮ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ರಸ್ತೆ ಮತ್ತು ಕಾಂಪೌಂಡ್ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಕೆಲವರು ರಸ್ತೆ ನಿರ್ಮಾಣಕ್ಕೆ ಅನಗತ್ಯ ಆಕ್ಷೇಪ ವ್ಯಕ್ತಪಡಿಸಿ ಕಾಮಗಾರಿಗೆ ಅಡ್ಡಿಪಡಿಸುತ್ತಿರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಸುರಕ್ಷಿತವಾಗಿ ಹಾಗೂ ಸುಲಭವಾಗಿ ಸಂಚರಿಸಲು ಈ ರಸ್ತೆ ಅತ್ಯಂತ ಅಗತ್ಯವಾಗಿದ್ದು, ಯಾವುದೇ ಅಡೆತಡೆಗಳಿಗೆ ಅವಕಾಶ ನೀಡದೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ದೇವಸ್ಥಾನದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಭಕ್ತರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.



























