ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೊ (48) ಮೃತ ದುರ್ದೈವಿ.
ಅವರು ಶನಿವಾರ ರಾತ್ರಿ ತಮ್ಮ ಮನೆಯ ಸಮೀಪದ ಹೊಳೆಯಲ್ಲಿ ಅವರು ನಾಪತ್ತೆಯಾಗಿದ್ದರು. ಭಾರೀ ಮಳೆ ಹಾಗೂ ಹೊಳೆಯಲ್ಲಿ ನೀರಿನ ಹರಿವಿನ ನಡುವೆಯೂ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಮತ್ತು ಸ್ಥಳೀಯರು ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಸತತ ಕಾರ್ಯಾಚರಣೆಯ ಬಳಿಕ ಸೋಮವಾರ ಬೆಳಗ್ಗೆ ಅವರ ಮೃತದೇಹ ಪತ್ತೆಯಾಗಿದೆ.ಆಗಸ್ಟ್ 1ರ ರಾತ್ರಿ ಜೀವನ್ ಅವರು ಮಾವನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಕಾಲುಸಂಕ ದಾಟುವಾಗ ಕಾಲುಜಾರಿ ತೋಡಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



























