ಪುತ್ತೂರು: 80 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆ.07 ರಂದು ಪುತ್ತೂರಿನಲ್ಲಿ ತಿರಂಗ ಯಾತ್ರೆ ನಡೆಯಲಿದ್ದು ಕಾರ್ಯಕ್ರಮದ ಸಿದ್ದತೆಗಳನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಚರ್ಚಿಸಿದರು.
ಸಭಾ ಕಾರ್ಯಕ್ರಮ ನಡೆಯುವ ಕಿಲ್ಲೆ ಮೈದಾನದ ಪುರಭವನ ಕ್ಕೆ ತೆರಳಿ ಕಲ್ಪಿಸಬೇಕಾದ ವ್ಯವಸ್ಥೆಗಳ ಬಗ್ಗೆ ಪುತ್ತೂರಿನ ಬಿಜೆಪಿ ಪದಾಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್ ಸಹಿತ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.




























