ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಶ್ರೀಪ್ರಸಾದ್ ಪಾಣಾಜೆ ಅವರನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನ ಸಹ ಉಸ್ತುವಾರಿಯಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಎಚ್. ಎಸ್. ನೇಮಕಗೊಳಿಸಿದ್ದಾರೆ.
ಶ್ರೀಪ್ರಸಾದ್ ಪಾಣಾಜೆ ಅವರು ಈ ಹಿಂದೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್‌ನ ಚುನಾಯಿತ ಅಧ್ಯಕ್ಷರಾಗಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ವಕ್ತಾರರಾಗಿ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪಕ್ಷ ಸಂಘಟನೆಯಲ್ಲಿ ಅವರ ಅನುಭವ, ಕಾರ್ಯಕ್ಷಮತೆ ಮತ್ತು ಸಂಘಟನಾ ಕೌಶಲ್ಯವನ್ನು ಪರಿಗಣಿಸಿ ಅವರಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ. ಅವರ ನೇಮಕಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆಗಳನ್ನು ಸಲ್ಲಿಸಿ, ಹೊಸ ಜವಾಬ್ದಾರಿಯಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.




























