ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಘಟನೆ ಪಡೀಲ್ ನಲ್ಲಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಪರಿಣಾಮ ವಾಹನಗಳಿಗೆ ಮತ್ತು ಅಂಗಡಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



























