ಪುತ್ತೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಇತಿಹಾಸ ಪ್ರಸಿದ್ಧ ಕರಾವಳಿಯ ಪವಿತ್ರ ಕ್ಷೇತ್ರವಾದ ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಹಾಗೂ ನಾಡಿನ ಸಮಸ್ತ ಜನರ ಸುಖ, ಶಾಂತಿ, ಸಮೃದ್ಧಿ ಮತ್ತು ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಿ ದೇವರ ಕೃಪಾಶೀರ್ವಾದ ಪಡೆದರು.
ಶತಮಾನಗಳ ಐತಿಹಾಸಿಕ ಹಾಗೂ ಪೌರಾಣಿಕ ಹಿನ್ನೆಲೆಯನ್ನು ಹೊಂದಿರುವ ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯವು ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. “ಹತ್ತೂರ ಒಡೆಯ, ಪುತ್ತೂರ ಮುತ್ತು” ಎಂದು ಭಕ್ತರಿಂದ ಆರಾಧಿಸಲ್ಪಡುವ ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ಅನುಗ್ರಹವು ಸಮಸ್ತ ಜನರ ಮೇಲೆ ಸದಾ ಇರಲಿ ಎಂದು ಸಿ.ಟಿ. ರವಿ ಪ್ರಾರ್ಥಿಸಿದರು.




























