ಇತ್ತೀಚೆಗೆ ಕರಾವಳಿಯ ಕಡಲತಡಿಯಲ್ಲಿ ನಡೆದ ಶೂಟೌಟ್ನಲ್ಲಿ ಓರ್ವ ಉದ್ಯಮಿ ಕೊಲೆಯಾಗಿದ್ದರು. ಇದೀಗ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್ ಘಟನೆ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಉದ್ಯಮಿ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ (death) ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಸಂಭವಿಸಿದೆ.
ಕೊಲೆಯಾದ ಡೇವಿಡ್ ಡಿಸೋಜಾ ಮುದರಂಗಡಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾಗಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶೂಟೌಟ್‌ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಇನ್ನು ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹತ್ಯೆಗೈದು ತಲೆಮರೆಸಿಕೊಂಡಿರುವ ಹಂತಕರ ಪತ್ತೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.




























