ಪುತ್ತೂರು: ಕಳೆದ ಸುಮಾರು ಎಂಟು ವರ್ಷಗಳಿಂದ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಚಿನ್ನದ ಕಸೂತಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ಮುಖೇಶ್ ದಾಕಡ (38) ಅವರು ಹೃದಯಾಘಾತದಿಂದ ನಿಧನರಾದ ಘಟನೆ ಆ.10ರ ನಸುಕಿನ ಜಾವ ನಡೆದಿದೆ.
ನೆಲ್ಲಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮುಖೇಶ್ ಅವರಿಗೆ ನಸುಕಿನ ಜಾವ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಆ.10ರ ರಾತ್ರಿ ಮುಖೇಶ್ ಅವರ ಮೃತದೇಹವನ್ನು ವಿಮಾನದ ಮೂಲಕ ರಾಜಸ್ಥಾನಕ್ಕೆ ಕೊಂಡೊಯ್ಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.



























