ಮೂಡುಬಿದಿರೆ: ಮಿಜಾರ್ ಬಳಿ ಇಂದು (ಆ.11) ಬೆಳಗ್ಗೆ ಸುಮಾರು 6.30ರ ವೇಳೆಗೆ ಬಾಡಿಗೆ ಮನೆಯಲ್ಲಿ ಅಡುಗೆ ಅನಿಲ (LPG) ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.ಘಟನೆಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಬೆಳಗ್ಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.




























