ಮಡಂತ್ಯಾರು: ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಣಕಜೆ ಸಮೀಪ ಪಲ್ಟಿಯಾದ ಘಟನೆ ಆ.11ರ ಸಂಜೆ ಸಂಭವಿಸಿದೆ.
ಮಡಂತ್ಯಾರು ಕಡೆಯಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಆಟೋ ರಿಕ್ಷಾ ರಸ್ತೆಯಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಶಾಲಾ ಮಕ್ಕಳು ಹಾಗೂ ಆಟೋ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಪರಿಣಾಮ ಆಟೋ ರಿಕ್ಷಾದ ಮುಂಭಾಗ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.



























