ಚಾಲಕನ ನಿಯಂತ್ರಣ ತಪ್ಪಿದ ಫಾರ್ಚೂನರ್ ಕಾರೊಂದು ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಆಗಸ್ಟ್ 14ರಂದು ಕೊಡಗು ಜಿಲ್ಲೆಯ ಸಂಪಾಜೆ ಶಾಲಾ ಬಳಿ ನಡೆದಿದೆ.
ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಫಾರ್ಚೂನರ್ ಕಾರು ಸಂಪಾಜೆ ಶಾಲಾ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಗುದ್ದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಸ್ಥಳೀಯರ ಸಹಕಾರದಿಂದ ಅವರನ್ನು ತಕ್ಷಣವೇ ರಕ್ಷಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




























