ಮಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ವಂದೇ ಮಾತರಂ ಗೀತೆಗೆ ಅವಮಾನ ಮಾಡಿ, ಅರ್ಧಕ್ಕೆ ನಿಲ್ಲಿಸುವಂತೆ ಹೇಳಿದ್ದು ಅಪರಾಧವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ನಗರದ ಉರ್ವ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ಬಿಜೆಪಿ ಕಾರ್ಯಕರ್ತರೊಂದಿಗೆ ಆಗಮಿಸಿದ ಅವರು, ಠಾಣಾಧಿಕಾರಿಗೆ ಲಿಖಿತ ದೂರು ನೀಡಿದ್ದಾರೆ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ಸೋನಿಯಾ ಗಾಂಧಿ ಅವರ ಮೇಲೆ ತಕ್ಷಣ ಎಫ್‌ಐಆರ್ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು. ಎಫ್‌ಐಆರ್ ದಾಖಲಿಸದಿದ್ದರೆ ರಾಜ್ಯದಲ್ಲಿ ರಾಷ್ಟ್ರ ವಿರೋಧಿ ಸರ್ಕಾರವಿದೆ ಎಂದು ನಾವು ಭಾವಿಸುತ್ತೇವೆ.
ಅಲ್ಲದೆ, ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿ ಮುಂದಿನ ಕಾನೂನು ಹೋರಾಟ ಮಾಡುತ್ತೇವೆ ಎಂದು ವಿಕಾಸ್ ಪುತ್ತೂರು ಎಚ್ಚರಿಸಿದರು.




























