ತುಂಬೆ: ಟೀಮ್ ಸತ್ಯಜಿತ್ ಸುರತ್ಕಲ್ ಇದರ ವಾರ್ಷಿಕ ಸಭೆಯು ತುಂಬೆಯ ಶಾರದಾ ಸಭಾ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸುವ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು. ಇದೇ ವೇಳೆ ಸತ್ಯಜಿತ್ ಸುರತ್ಕಲ್ ಅವರ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ನಿರ್ಧಾರಗಳ ಬಗ್ಗೆಯೂ ಚರ್ಚೆ ನಡೆಯಿತು.
ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ 8 ತಾಲೂಕುಗಳಿಗೆ ಸಮಿತಿಗಳನ್ನು ರಚಿಸಲಾಯಿತು. ಮುಂದಿನ ದಿನಗಳಲ್ಲಿ ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳನ್ನು ತಾಲೂಕು ಮಟ್ಟದಲ್ಲಿ ಪರಿಣಾಮಕಾರಿಯಾಗಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಸತ್ಯಜಿತ್ ಸುರತ್ಕಲ್, ರವಿರಾಜ್ ಬಿ.ಸಿ. ರೋಡ್, ಸಂತೋಷ್ ಪೊಳಲಿ, ಸಂದೀಪ್ ಪಂಪ್ವೆಲ್, ಜಗದೀಶ್ ನೇತ್ತರಕೆರೆ, ಧನಂಜಯ್ ಕುಂದಾಪುರ, ಸಂದೀಪ್ ಅಂಬ್ಲಮೊಗರು ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.



























