ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಕರಿಯ ಅವರು ಎಎಸ್‌ಐ ಆಗಿ ಬಡ್ತಿ ಹೊಂದಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಸ್ಕರಿಯ ಅವರು ಪೊಲೀಸ್ ಇಲಾಖೆಯಲ್ಲಿ ಕಳೆದ 29 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ವೃತ್ತಿ ಆರಂಭಿಸಿದ ಅವರು ಬಳಿಕ ಮಂಗಳೂರು ಪೂರ್ವ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಡಿಸಿಬಿ ಮಂಗಳೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಇದೀಗ ಸುಳ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು ಬಡ್ತಿ ಹೊಂದಿ ಎಎಸ್‌ಐ ಆಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಸ್ಕರಿಯ ಅವರು ಕಡಬ ತಾಲೂಕಿನ ಬಲ್ಯ ಗ್ರಾಮದ ಮಾತ್ರಡಿ ಮನೆಯ ದಿ. ಎಂ.ಜಿ. ಅಬ್ರಹಾಂ ಹಾಗೂ ದಿ. ಸಾರಮ್ಮ ಅಬ್ರಹಾಂ ದಂಪತಿಯ ಪುತ್ರರಾಗಿದ್ದಾರೆ.




























