ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ, ಕಳುವಾಗಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಆಗಸ್ಟ್ 18ರ ಮಧ್ಯರಾತ್ರಿ ದೇವಸ್ಥಾನದ ಮೇಲ್ಛಾವಣಿಯ ಜಾಲರಿ ಮೂಲಕ ಒಳ ಪ್ರವೇಶಿಸಿದ ಆರೋಪಿ, ದೇವಸ್ಥಾನದಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನು ಬೇರೆಡೆಗೆ ತಿರುಗಿಸಿ, ಕಾಣಿಕೆ ಹುಂಡಿಯ ಬೀಗ ಮುರಿದು ಹಣ ಕಳವು ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಮುಲ್ಕಿ ಪೊಲೀಸರು ರವಿಕುಮಾರ @ ರವಿ ಹೆಚ್.ಜಿ. (20) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಪೋಸ್ಟ್ ವ್ಯಾಪ್ತಿಯ ಅಜ್ಜಿಮಡ, ಕುಬೇರಂಗಡಿ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯಿಂದ ಕಳುವಾಗಿದ್ದ ₹2,195 ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ಆರೋಪಿಯ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳು
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಅ.ಕ್ರ. 44/2024 – ಕಲಂ 457, 380 ಐಪಿಸಿ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಅ.ಕ್ರ. 148/2024 – ಕಲಂ 457, 380 ಐಪಿಸಿ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಅ.ಕ್ರ. 365/2024 – ಕಲಂ 303(2) ಬಿಎನ್‌ಎಸ್ ಜೊತೆಗೆ 86 ಕೆ.ಎಫ್. ಆಕ್ಟ್.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಅ.ಕ್ರ. 386/2024 – ಕಲಂ 303(2) ಬಿಎನ್‌ಎಸ್ ಜೊತೆಗೆ 86 ಕೆ.ಎಫ್. ಆಕ್ಟ್.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಅ.ಕ್ರ. 354/2024 – ಕಲಂ 331(3), 305 ಬಿಎನ್‌ಎಸ್.
ಮುಲ್ಕಿ ಪೊಲೀಸರ ತ್ವರಿತ ಕಾರ್ಯಾಚರಣೆಯನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ.





























