ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್ ಬಸ್ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯ ಎಡ ಭಾಗದ ಟ್ರೆಂಚ್‌ಗೆ ಬಸ್ ಬಿದ್ದಿದ್ದು, ಬಸ್‌ನ ಮುಂಭಾಗ ಜಖಂ ಆಗಿದೆ. ಈ ಅಪಘಾತದಲ್ಲಿ 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಐಲ್ಯಾಂಡ್ ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿತ್ತು. ಬಸ್‌ನಲ್ಲಿ 53 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.




























