ಕಡಬ: ಇಲ್ಲಿನ ಸೈಂಟ್ ಜೋಕಿಮ್ಸ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪುರುಷರ ಉಡುಪುಗಳ ಸಂಪೂರ್ಣ ಮಳಿಗೆ ಬರ್ಲಿನ್ ಜು.1ರಂದು ಶುಭಾರಂಭಗೊಳ್ಳಲಿದೆ.
ಉದ್ಘಾಟನಾ ಕಾರ್ಯಕ್ರಮಕ್ಕೆ ಸೈಂಟ್ ಜೋಕಿಮ್ಸ್ ಚರ್ಚ್ ನ ಧರ್ಮಗುರು ಫಾ.ರೊನಾಲ್ಡ್ ಲೋಬೊ, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಕಡಬ
ಆರಕ್ಷಕ ಉಪನಿರೀಕ್ಷಕ ರುಕ್ಮ ನಾಯ್ಕ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್, ಕ.ರ.ವೇ, ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಮಹಮ್ಮದ್ ಕುಕ್ಕುವಳ್ಳಿ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಸೇರಿದಂತೆ ಹಲವಾರು ಗಣ್ಯರು ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಪಾಲುದಾರರಾದ ಮನ್ಸೂರ್ ಬಪ್ಪಳಿಗೆ, ಸವಾದ್ ಬಪ್ಪಳಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.