ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನಡೆಯಲಿರುವ ಈ ವರ್ಷದ ಗಣೇಶೋತ್ಸವದ ಅಲಂಕಾರ ಕಾರ್ಯದ ತಯಾರಿಗೆ 60 ಅಡಿ ಉದ್ದದ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ವಿಜಯನಾರಾಯಣ ಕೆ.ಎಂ. ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ಮಂಕುಡೆ ಅವರು ತೆಂಗಿನಕಾಯಿ ಒಡೆಯುವ ಮೂಲಕ ಅಲಂಕಾರ ಕಾರ್ಯಕ್ಕೆ ಚಾಲನೆ ನೀಡಿದರು.
ಅಲಂಕಾರ ಸಮಿತಿ ಪ್ರಭಾರಿ ನವೀನ್ ಎಸ್.ಪಿ. ಅವರೊಂದಿಗೆ ನಿತೇಶ್ ಕಲ್ಲೇಗ, ಪ್ರಸನ್ನ ದರ್ಬೆ ಸೇರಿದಂತೆ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗಣೇಶೋತ್ಸವದ ಅಂಗವಾಗಿ ನಡೆಯಲಿರುವ ಅಲಂಕಾರ ಕಾರ್ಯಕ್ಕೆ ಅಗತ್ಯ ಸಿದ್ಧತೆಗಳು ಆರಂಭಗೊಂಡಿವೆ.





























