ಮಂಗಳೂರು: ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ
ಪ್ರಸ್ತಾವಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ನಿಲುಗಡೆ ನೀಡಬೇಕು ಎಂದು ಆಗ್ರಹಿಸಿ ಆರಂಭಗೊಂಡ ಆನ್‌ಲೈನ್ ಸಹಿ ಅಭಿಯಾನಕ್ಕೆ ಭರ್ಜರಿ ಸ್ಪಂದನೆ ದೊರಕಿದೆ.
ಈ ಅಭಿಯಾನದಲ್ಲಿ ಹಲವರು ಭಾಗವಹಿಸಿ ಸಹಿ ಹಾಕಿದ್ದಾರೆ. ಭಾನುವಾರ ಸಂಜೆ ವೇಳೆಗೆ 2,500ಕ್ಕೂ ಅಧಿಕ ಮಂದಿ ಸಹಿ ಮಾಡಿದ್ದಾರೆ.




























