ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ವತಿಯಿಂದ ವಿಟ್ಲದ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಪ್ರಸಕ್ತ ಸಾಲಿನ ಸಾಧನಾ ಪ್ರಶಸ್ತಿ ಲಭಿಸಿದೆ. ಸಂಘಕ್ಕೆ ಇದೇ ಮೊದಲ ಬಾರಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಾಧನಾ ಪುರಸ್ಕಾರ ದೊರೆತಿದೆ.
2025-26ನೇ ಆರ್ಥಿಕ ಸಾಲಿನಲ್ಲಿ ಸಂಘವು ರೂ.294.84 ಕೋಟಿ ವ್ಯವಹಾರ, ರೂ.24.37 ಕೋಟಿ ಠೇವಣಿ, ರೂ.21.94 ಕೋಟಿ ಸಾಲ ಹಾಗೂ ರೂ.48.51 ಲಕ್ಷ ಲಾಭ ಗಳಿಸಿ ಗಮನಾರ್ಹ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ.
ಶನಿವಾರ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಎನ್. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪಿ. ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಸಂಘದ ನಿರ್ದೇಶಕರಾದ ಸಂಜೀವ ಪೂಜಾರಿ ಎಂ.ಎಸ್., ಪ್ರಕಾಶ್ ಕೆ. ವಿಟ್ಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





























