ಪುತ್ತೂರು: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬಂದೋಬಸ್ತ್ ಕರ್ತವ್ಯಕ್ಕೆ ಒಟ್ಟು 1 ಎಡಿಶನಲ್ ಎಸ್ಪಿ, 1 ಡಿವೈಎಸ್ಪಿ, 8 ಪಿಎಸ್‌ಐ, 10 ಎಎಸ್‌ಐ ಹಾಗೂ 50 ಪೊಲೀಸ್ ಸಿಬ್ಬಂದಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇದರೊಂದಿಗೆ 5 ಕೆಎಸ್‌ಆರ್‌ಪಿ ತುಕಡಿ, 3 ಡಿಎಆರ್ ತುಕಡಿ ಹಾಗೂ 1 ಎಸ್‌ಎಫ್ ತುಕಡಿಯನ್ನು ಸಹ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.
ಈದ್ ಮಿಲಾದ್ ಆಚರಣೆ ಶಾಂತಿಯುತವಾಗಿ ನಡೆಯುವಂತೆ ಪೊಲೀಸರು ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಂಡಿದ್ದು, ಪ್ರಮುಖ ಸ್ಥಳಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.




























