ಪುತ್ತೂರು: ದರ್ಬೆ ಪ್ರಕರಣದಲ್ಲಿ ಗಾಯಗೊಂಡು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುವ ಸದಾಶಿವ ಪೈ ಅವರ ಪತ್ನಿಯ ಆರೋಗ್ಯವನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿಚಾರಿಸಿದರು.
ನಗರದ ಆದರ್ಶ ಆಸ್ಪತ್ರೆಗೆ ಭೇಟಿ ನೀಡಿದ ಅವರು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ತಾಲಿಬಾನಿ ಆಡಳಿತ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.




























