ವಿಟ್ಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ಅ.ಕ್ರ. 103/2019ರಲ್ಲಿ ಕಲಂ 341, 353, 427, ರ/w 34 ಐಪಿಸಿ ಹಾಗೂ ಸೆಕ್ಷನ್ 2, 4(b) KPDL ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿಟ್ಲ ಪಡ್ನೂರು ನಿವಾಸಿ ಗಣೇಶ್ (30) ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ದಿನಾಂಕ 23.08.2026ರಂದು ವಿಟ್ಲ ಠಾಣಾ ಪೊಲೀಸ್ ನಿರೀಕ್ಷಕರು ಹಾಗೂ ಉಪನಿರೀಕ್ಷಕರ ಮಾರ್ಗದರ್ಶನದಲ್ಲಿ ಹೆಡ್ ಕಾನ್‌ಸ್ಟೇಬಲ್ 951 ಹರೀಶ್ ಹಾಗೂ ಕಾನ್‌ಸ್ಟೇಬಲ್ 2345 ರಮೇಶ್ ಅವರು ಕಾರ್ಯಾಚರಣೆ ನಡೆಸಿ ವಾರಂಟ್ ಅಸಾಮಿ ಗಣೇಶ್‌ನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.





























