ಪುತ್ತೂರು: ಹಿಂದೂ ಜಾಗರಣ ವೇದಿಕೆ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್‌ಗೆ ಪುತ್ತೂರು ನಗರದ ಹಲವು ವರ್ತಕರು ಸ್ಪಂದಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಈದ್ ಮಿಲಾದ್ ಹಬ್ಬ ಹಾಗೂ ಹಿಂದೂ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಗಾಂಧಿಕಟ್ಟೆ ಬಳಿ ಸ್ಪೆಷಲ್ ಆಕ್ಷನ್ ಫೋರ್ಸ್, ದರ್ಬೆ ಪರಿಸರದಲ್ಲಿ ರಾಜ್ಯ ಮೀಸಲು ಪಡೆ ಸೇರಿದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಾಹನವನ್ನು ನಿಯೋಜಿಸಲಾಗಿದೆ. ನಗರದ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿರಂತರ ನಿಗಾ ವಹಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.





























