ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಗಾಜುಗಳಿಗೆ ಸ್ಟಿಕ್ಕರ್ ಅಳವಡಿಸುವುದು ಹಾಗೂ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್ ಅಳವಡಿಸಿಕೊಂಡು ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣಾ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳನ್ನು ಪತ್ತೆಹಚ್ಚಿದ ಪೊಲೀಸರು ದಂಡ ವಿಧಿಸಿದ್ದಾರೆ.
ಉತ್ಸವ, ಹಬ್ಬ-ಹರಿದಿನಗಳು ಸೇರಿದಂತೆ ಯಾವುದೇ ಕಾರ್ಯಕ್ರಮಗಳ ನೆಪದಲ್ಲಿ ವಾಹನಗಳಿಗೆ ನಿಯಮಬಾಹಿರವಾಗಿ ಸ್ಟಿಕ್ಕರ್ ಅಳವಡಿಸುವುದು, ನೋಂದಣಿ ಸಂಖ್ಯೆಯನ್ನು ಮರೆಮಾಚುವುದು ಸೇರಿದಂತೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಸಂಚಾರ ಠಾಣಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತ ಸಂಚಾರಕ್ಕೆ ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.



























