ಪುತ್ತೂರು: ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಘಟಕದ ನೂತನ ಕಟ್ಟಡದ ಕಾಮಗಾರಿ ಪ್ರಾರಂಭೋತ್ಸವದ ಅಂಗವಾಗಿ ಗಣಪತಿ ಹವನ ನಡೆಯಿತು.
ರೋಟರಿ ಬ್ಲಡ್ ಬ್ಯಾಂಕ್ ಸಮೀಪದ ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಪತಿ ಹವನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ನ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ನೂತನ ಕಟ್ಟಡವು ಸಂಘಟನೆಯ ವಿವಿಧ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಕಾರ್ಯಕ್ರಮದಲ್ಲಿ ಆಶಯ ವ್ಯಕ್ತಪಡಿಸಲಾಯಿತು.




























