ಪುತ್ತೂರು: ದರ್ಬೆಯ ಗಲಾಟೆ ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಯುವ ದೃಷ್ಟಿಯಿಂದ ಪೊಲೀಸ್ ತನಿಖೆ ಮುಂದುವರಿದಿದ್ದು, ಘಟನೆಗೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಹಲವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಗಲಾಟೆಯ ಸಂದರ್ಭ ಸ್ಥಳದಲ್ಲಿ ಹಲವರು ಜಮಾಯಿಸಿ ಗೊಂದಲದ ವಾತಾವರಣ ನಿರ್ಮಾಣಗೊಂಡಿದ್ದು, ಜತೆಗೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿರುದ್ಧವೂ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ವೀಡಿಯೋ ದಾಖಲೆಗಳ ಆಧಾರದಲ್ಲಿ ಹಲವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಪೊಲೀಸರು ಮುಂದಿನ ಕ್ರಮದಲ್ಲಿ ಅವರ ಹೇಳಿಕೆಯನ್ನೂ ಪಡೆಯಲಿದ್ದಾರೆ.




























