ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.), ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ಆ. 28ರಂದು ಶುಕ್ರವಾರ ಪುತ್ತೂರಿನ ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7 ಗಂಟೆಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಯಿಂದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ 12 ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ 12.45ರ ನಂತರ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಗಣ್ಯರು, ಅತಿಥಿಗಳು ಮತ್ತು ಪೂಜಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಮಹಿಳೆಯರು ಸೇರಿದಂತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ವರಮಹಾಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.





























