ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬೈಪಾಡಿ ಕುರಿಯಾಳ ನಿವಾಸಿ ಭರತ್ ಗೌಡ ಅವರ ಪುತ್ರ ಶ್ರವಣ್ ಬಿ.ಕೆ. (14) ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಆ.30ರಂದು ನಡೆದಿದೆ.
ಶ್ರವಣ್ ಬೆಳ್ತಂಗಡಿಯ ಖಾಸಗಿ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆಯಷ್ಟೇ ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಬಾಲಕ ಇಂದು ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ. ಮೃತ ಬಾಲಕ ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾನೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




























