ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ಹಾಗೂ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ಅವರು ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಡಾ| ಈಶ್ವರ ಪಿ. ಅವರ ಮಾರ್ಗದರ್ಶನದಲ್ಲಿ “Performance Evaluation of Primary Agriculture Co-operative Credit Societies in Dakshina Kannada and Udupi Districts” ಎಂಬ ವಿಷಯದ ಕುರಿತು ಇವರು ಸಂಶೋಧನೆ ನಡೆಸಿ ಡಾಕ್ಟರೇಟ್ ಪದವಿಯನ್ನು ಪೂರ್ಣಗೊಳಿಸಿದ್ದಾರೆ.



























