ಪುತ್ತೂರು: ದಕ್ಷಿಣ ಕನ್ನಡ ಮುಸ್ಲಿಂ ಯುವಜನ ಪರಿಷತ್ (ರಿ.), ಪುತ್ತೂರು ವತಿಯಿಂದ ಆಗಸ್ಟ್ 31ರಂದು ಆಯೋಜಿಸಲು ಉದ್ದೇಶಿಸಿದ್ದ ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಪುತ್ತೂರಿನ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯನ್ನು ಕಾಪಾಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿತ್ತು. ಆದರೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಅದೇ ದಿನ ಇತರ ಕಾರ್ಯಕ್ರಮಗಳು ಇರುವ ಹಿನ್ನೆಲೆಯಲ್ಲಿ ಅನುಮತಿ ಒದಗಿಸಲು ಸಾಧ್ಯವಾಗದ ಕಾರಣ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮುಸ್ಲಿಂ ಯುವಜನ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯ ಸಂಚಾಲಕ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಅವರು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು, ಸೂಕ್ತ ದಿನಾಂಕ ನಿಗದಿಪಡಿಸಿ ಶಾಂತಿಯುತವಾಗಿ ಕಾರ್ಯಕ್ರಮ ಎಲ್ಲರನ್ನೂ ಸೌಹಾರ್ದತೆಯಿಂದ ಸೇರಿಸಿ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.




























