ಪುತ್ತೂರು:ದರ್ಬೆಯ ಜನಸೇವಾ ಕೇಂದ್ರದಲ್ಲಿ ದಾಖಲಾತಿಯೊಂದಕ್ಕೆ ತಾಂತ್ರಿಕ ದೋಷದಿಂದ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಕೊಲೆಯತ್ನ ಆರೋಪದಡಿ ಪ್ರಕರಣ ದಾಖಲಾಗಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಇನ್ನೋರ್ವ ಆರೋಪಿಯಾಗಿರುವ ಅಂಗಡಿ ಮಾಲಕಿ ಅಂಜನಾ ಎಸ್.ಪೈ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಅಂಗಡಿ ಮಾಲಕಿ ಅಂಜನಾ ಎಸ್.ಪೈ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡ್, ನಿಶಾ ಕುಮಾರಿ ವಾದಿಸಿದ್ದರು.



























