ವಿಟ್ಲ: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 2ರಂದು ಬೆಳಗ್ಗೆ 10.30ಕ್ಕೆ ಪೊನ್ನೊಟ್ಟು-ವಿಟ್ಲದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ ಎನ್. ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಂಘದ ಎಲ್ಲಾ ಸದಸ್ಯರು ನಿಗದಿತ ಸಮಯಕ್ಕೆ ಆಗಮಿಸಿ ಸಭಾ ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಸಂಘದ ವತಿಯಿಂದ ವಿನಂತಿಸಲಾಗಿದೆ.





























