ಪುತ್ತೂರು: ಶಾಸಕ ಅಶೋಕ್ ರೈ ಅವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
ಸೆಪ್ಟೆಂಬರ್ 2ರಂದು ಶಾಸಕ ಅಶೋಕ್ ರೈ ಅವರ ಹುಟ್ಟುಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಂಗಡವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕ ಅಶೋಕ್ ರೈ ಹಾಗೂ ಅವರ ಪತ್ನಿ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಭೇಟಿಯಾಗಿ ಹಣ್ಣುಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಹುಟ್ಟುಹಬ್ಬದ ಪ್ರಯುಕ್ತ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಶಾಸಕರು ಸರಳವಾಗಿ ಹುಟ್ಟುಹಬ್ಬ ಆಚರಿಸಿದರು.





























