ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿರುವ ದೀಪಕ್ 38) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಎಡಮಂಗಲದ ಪುಳಿಕುಕ್ಕು ನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಅವರು ಅನಾರೋಗ್ಯದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಹೋದರ ದಿವಾಕರ ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಪತ್ನಿ, ಮಗು ಹಾಗೂ ಸಹೋದರರನ್ನು ಆಗಲಿದ್ದಾರೆ.




























