ಪುತ್ತೂರು : ಕೌಟುಂಬಿಕ ಕಲಹ ಕುರಿತು ಬಂದ ದೂರಿನ ಮೇರೆಗೆ ವಿಚಾರಣೆಗೆ ಮನೆಗೆ ಹೋಗಿದ್ದ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಸೆ.4ರಂದು ರಾತ್ರಿ ಪಡ್ನೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಹಲ್ಲೆಯಿಂದ ಗಾಯಗೊಂಡಿರುವ ಇಬ್ಬರು ಪೊಲೀಸರು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.




























