ಉಳ್ಳಾಲ : ಕ್ಷುಲ್ಲಕ ಕಾರಣಕ್ಕೆ ತಂದೆಯಿಂದಲೇ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ರನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಶರ್ಮಿತ್(25) ಚಿಕಿತ್ಸೆ ಪಡೆಯುತ್ತಿರುವ ಯುವಕ.
ಪುತ್ರನಿಗೆ ತಂದೆಯೇ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಜಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ನಡೆದಿತ್ತು. ಗಂಭೀರ ಸ್ಥಿತಿಯಲ್ಲಿರುವ ಪುತ್ರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಘಟನೆ ನಡೆದಾಕ್ಷಣ ಆರೋಪಿ ತಂದೆಯನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಂದೆ ವಿಶ್ವನಾಥ ಶೆಟ್ಟಿ ಪ್ರಕರಣದ ಆರೋಪಿಯಾಗಿದ್ದಾನೆ.
ತಂದೆ ಹಾಗೂ ಪುತ್ರ ಹೈನುಕಾರಿಕೆ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ನಡೆದಿತ್ತು. ಇದೇ ದ್ವೇಷದಿಂದ ಮನೆಯ ಕೋಣೆಯೊಳಗೆ ಮಲಗಿದ್ದ ಪುತ್ರನ ಮೇಲೆ ಪೆಟ್ರೋಲ್ ಸುರಿದ ವಿಶ್ವನಾಥ ಶೆಟ್ಟಿ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದ.
ಗಂಭೀರ ಗಾಯಗೊಂಡ ಶರ್ಮಿತ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.