ಪುತ್ತೂರು: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ಮೃತಪಟ್ಟ ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ವಿದ್ಯಾರ್ಥಿ ಶ್ರಮಿಕ್ ರೈ (20) ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಶಾಸಕ ಅಶೋಕ್ ರೈ ಪಡೆದರು.
ಶ್ರಮಿಕ್ ರೈ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಶಾಸಕ ಅಶೋಕ್ ರೈ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ವಿದ್ಯಾರ್ಥಿಯೊಬ್ಬರು ಹಠಾತ್ ನಿಧನರಾಗಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.





























