ಪುತ್ತೂರು : ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬುದ್ಧ, ಬಸವಣ್ಣ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಮುತ್ತೂರು ಬ್ಲಾಕ್ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ವೇದಮೂರ್ತಿಎಂಬವರು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ರೀತಿಯಲ್ಲಿ ಹಾಗೂ ಬುದ್ಧ, ಬಸವಣ್ಣ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಹಾಗೂ ದ್ವೇಷಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಈ ಕುರಿತು ಸೆಪ್ಟೆಂಬರ್ 8, 2026ರಂದು ದೂರು ಸಲ್ಲಿಸಲಾಗಿದ್ದು, ಪೊಲೀಸರು ಪ್ರಕರಣದ ಕುರಿತು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಬಾಬು ಮರಿಕೆ , ವಿಟ್ಲ ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸೋಮನಾಥ ಉಪ್ಪಿನಂಗಡಿ , ಜಿಲ್ಲಾ ಆರೋಗ್ಯ ರಕ್ಷಕ ಸಮಿತಿ ಸದಸ್ಯ ದಾಮೋಧರ್ ಮುರ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ, ಎಸ್ ಸಿ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಉಪೇಂದ್ರ ಸಂಟ್ಯಾರ್, ಗಣೇಶ್ ಕಾರೆಕ್ಕಾಡು ಉಪಸ್ಥಿತರಿದ್ದರು.





























